ಬೆಂಗಳೂರು : ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಸಮ್ಮುಖದಲ್ಲಿ ನಡೆದ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ಮುಕ್ತಾಯವಾಗಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ನಡೆಯಿತು. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಹಮ್ಮಿಕೊಳ್ಳಲಾಗಿತ್ತು. ಸುಮಾರು ನಾಲ್ಕು ತಾಸುಗಳ ಸುದೀರ್ಘ ಸಭೆ ನಡೆದಿದೆ. ಕೆಲವೇ ಕ್ಷಣದಲ್ಲಿ ವಿಪಕ್ಷ ನಾಯಕರಿಂದ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಪಂಜಾಬ್ ಸಿಎಂ ಭಗವಂತ್ ಮಾನ್, ಎನ್ಸಿಪಿ ವರಿಷ್ಠ ಶರದ್ ಪವಾರ್, ಬಿಹಾರ ಡಿಸಿಎಂ ತೇಜಸ್ವಿ ಯಾದವ್, ಲಾಲೂ ಪ್ರಸಾದ್ ಯಾದವ್, ಫಾರೂಕ್ ಅಬ್ದುಲ್ಲಾ, ಅಖಿಲೇಶ್ ಯಾದವ್, ಸೀತಾರಾಮ್ ಯೆಚೂರಿ, ಓಮರ್ ಅಬ್ದುಲ್ಲಾ, ಡಿ. ರಾಜ, ವೈಕೋ, ಉದ್ದವ್ ಠಾಕ್ರೆ, ಮೆಹಬೂಬಾ ಮುಫ್ತಿ ಸೇರಿದಂತೆ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.