ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ.
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜನೆ.ಸಂಜೆ 5ಗಂಟೆಗೆ ಅಧಿಕೃತವಾಗಿ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ.
1ಕೋಟಿ 28ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಜಾರಿ.ಮನೆಯ ಒಡತಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಯೋಜನೆ.ಮೈಸೂರು ಒನ್,ಕರ್ನಾಟಕ ಒನ್,ಗ್ರಾಮ ಒನ್,ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ.ಗೃಹಲಕ್ಷ್ಮಿ ಯೋಜನೆಗೆ ಆಪ್ ತಯಾರು ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿರುವ ಶಕ್ತಿ ಯೋಜನೆ,ಗೃಹ ಜ್ಯೋತಿ ಯೋಜನೆ,ಅನ್ನಭಾಗ್ಯ ಯೋಜನೆ.
ಇದೀಗ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ನಾಲ್ಕನೇ ಯೋಜನೆ ಗೃಹಲಕ್ಷ್ಮಿ ಯೋಜನೆ ಇಂದಿನಿಂದ ಜಾರಿಗೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುತ್ತಿದ್ದ ವಿಪಕ್ಷಗಳು.ಎಲ್ಲಾ ಯೋಜನೆಗಳನ್ನ ಹಂತ ಹಂತವಾಗಿ ಜಾರಿ ಮಾಡುವ ಮೂಲಕ ವಿಪಕ್ಷಗಳ ಟೀಕೆಗೆ ರಾಜ್ಯ ಸರ್ಕಾರ ತಿರುಗೇಟು.ಆಗಸ್ಟ್ 15ರಂದು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ