ಬೆಂಗಳೂರು : ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ.
ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್‌ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು
ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್‌ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ