ಮೈಸೂರು : ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿದರು.
ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು.ಪ್ರವಾಸಿಗರಿಗೆ ಆಕರ್ಷಣೀಯವಾಗುವಂತೆ, ಭಕ್ತರಿಗೆ ನೆಮ್ಮದಿ ಸಿಗುವವಂತೆ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಮಾಡಲಾಗುವುದು.ಈ ಸಂಬಂಧ ತಜ್ಣರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟ ಬಳಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗಿದೆ.
ಹೀಗಾಗಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.