ತಿ.ನರಸೀಪುರ : ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಹೀನ ಕೃತ್ಯಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನೆ ನಡೆಸಲಾಯಿತು.
ಎರಡು ಜನಾಂಗೀಯ ನಡುವೆ ನಡೆಯುತ್ತಿರುವ ಹಿಂಸಾಚಾರ ತಡೆಯಲು ಮಣಿಪುರ ಬಿಜೆಪಿ ಸರ್ಕಾರ ವಿಫಲವಾಗಿದೆ.ಮಹಿಳೆಯರನ್ನು ಬೆತ್ತಲೆ ಮಾಡಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿರುವುದು ಘೋರ ಖಂಡನೀಯ.ಕೂಡಲೇ ಪ್ರಧಾನಮಂತ್ರಿಗಳು ಮದ್ಯ ಪ್ರವೇಶಿಸಿ ರಾಷ್ಟ್ರಪತಿ ಆಳ್ವಿಕೆ ಏರಬೇಕು.
ಮಹಿಳೆಯರನ್ನು ಬೆತ್ತಲೆಗೊಳಿಸಿದ ಕಿಡಿಗೇಡಿಗಳಿಗೆ ಘೋರ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.