ಮೈಸೂರು : ಕಬಿನಿ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ.
ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳ ಮಾಡಲಾಗಿದ್ದು ಜಲಾಶಯದಿಂದ 20ಸಾವಿರ ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡುಗಡೆ ಮಾಡಲಾಗಿದೆ.
ಕಬಿನಿ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಬಾಕಿಯಿದೆ. ಕಬಿನಿ ಜಲಾಶಯದ ಸದ್ಯದ ಒಳಹರಿವು 25,750 ಕ್ಯೂಸೆಕ್.20000 ಕ್ಯೂಸೆಕ್ ನೀರು ಕಪಿಲಾ ನದಿಗೆ ಬಿಡುಗಡೆ ಮಾಡಿದ್ದು,ಕಪಿಲಾ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೊಡಲಾಗಿದೆ.
2284 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿಗ
2281 ಅಡಿಗಳಷ್ಟು ನೀರು ಸಂಗ್ರಹವಾಗಿದೆ.