ಮೈಸೂರು : 24ನೇ ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆ
ಕಾರ್ಗಿಲ್ ವಿಜಯೋತ್ಸವವನ್ನು ನಗರದ ಮೆಟ್ರೋ ಪೋಲ್ ವೃತ್ತದ ಬಳಿಯಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಯುವ ಭಾರತ್ ಸಂಘಟನೆ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪುಷ್ಪಾರ್ಚನೆ ಮೂಲಕ ದೇಶದ ಸೈನಿಕರಿಗೆ ಗೌರವ ಸಲ್ಲಿಕೆ ಮಾಡಿ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿ ಯೋಧರಿಗೆ ಗೌರವಾರ್ಪಣೆ ಮಾಡಿದರು. ಕಾರ್ಯಕರ್ಮದಲ್ಲಿ
ಮೇಯರ್ ಶಿವಕುಮಾರ್, ಮಾಜಿ ಶಾಸಕ ಎಲ್ ನಾಗೇಂದ್ರ, ಪಾಲಿಕೆ ಸದಸ್ಯೆ ಪ್ರಮಿಳಾ ಭರತ್,ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಾರಾಯಣಗೌಡ ಅರ್ಚಕ ಸಂಘದ ಅಧ್ಯಕ್ಷ ವಿದ್ವಾನ್ ಕೃಷ್ಣ ಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು.