ಮೈಸೂರು : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನೂ ಖಂಡಿಸಿ ಹಾಗೂ ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.
ನಗರದ ಜಿಪಂ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಪ್ರಕರಣದ ತಪ್ಪಿಸ್ಥರನ್ನು ಕೂಡಲೇ ಬಂಧಿಸಬೇಕು ಅಲ್ಲದೆ ಪ್ರಕರಣದ ಹಿಂದೆ ಯಾರಿದ್ದರೆ ಅವರ ಉದ್ದೇಶ ಏನು ಎಂದು ರಾಜ್ಯದ ಜನರಿಗೆ ಗೊತ್ತಾಗಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.
ಪ್ರತಿಭಟನೆಯಲ್ಲಿ ಉಪಮೇಯರ್ ರೂಪ,ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್,ಸೇರಿದಂತೆ ನೂರಾರು ಮಹಿಳಾ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.