ಹನೂರು : ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹನೂರು ತಾಲ್ಲೂಕಿನ ಜಲ್ಲಿ ಪಾಳ್ಯ ಗ್ಯಾಮದ ಕೊಳಂದೈ (47) ಬಂಧಿತ ಆರೋಪಿಯಾಗಿದ್ದಾನೆ.
ಕಾಡು ಪ್ರಾಣಿಗಳ ಬೇಟೆಯಾಡಲು ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.
ಖಚಿತ ಮಾಹಿತಿ ಮೇರೆಗೆ ಹನೂರು ತಾಲ್ಲೂಕಿನ ರಾಮಾಪುರ ಪೋಲಿಸರ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಯಾವುದೇ ಪರವಾನಗಿ ಇಲ್ಲದೆ ಇಟ್ಟುಕೊಂಡಿದ್ದ ಕೊಳಂದೈನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಈ ಕುರಿತು
ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.