ಗುಂಡ್ಲುಪೇಟೆ : ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 7 ಮಕ್ಕಳು ಅಸ್ವಸ್ಥಗೂಂಡ ಘಟನೆ ಕಳೆದ ವಾರ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದ್ದು ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.
ಚಿಕನ್ ಊಟ ಸೇವಿಸಿ ಅಸ್ವಸ್ಥರಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ. ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.ವಿದ್ಯಾರ್ಥಿಗಳು ಬೆಳಗಿನ ತಿಂಡಿ ಸೇವಿಸಿ ಅಸ್ವಸ್ಥರಾಗಿದ್ದಾರೆ. ಇದು
ವಸತಿ ಶಾಲೆಯ ಆಡಳಿತ ವೈಖರಿ ಮತ್ತು ಅನೈರ್ಮಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಈ ಘಟನೆಗೆ ವಿದ್ಯಾರ್ಥಿ ಪೋಷಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಏಳು ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥತರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಬೆಳಗಿನ ತಿಂಡಿ ಟೋಮ್ಯಾಟೋ ಬಾತ್ ಅನ್ನು ಮಕ್ಕಳಿಗೆ ಹಾಸ್ಟಲ್ ಸಿಬ್ಬಂದಿ ನೀಡಿದ್ದಾರೆ.
ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸಂಜನಾ(15), ಸಂಗೀತ (13), ಪ್ರಜ್ವಲ್(15) ಎಂಬ ಏಳು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಸಮೀಪದ ಹೊರೆಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಹೊಟ್ಟೆ ನೋವು ಹೆಚ್ಚು ಕಾಣಿಸಿಕೊಂಡ ಹಿನ್ನಲೆ ಆತನನ್ನು ಬೇಗೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್ ಹಾಗೂ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.ಘಟನೆಯಲ್ಲಿ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.