ಮೈಸೂರು : ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ನ ಪೈಪ್ ಸ್ಫೋಟಗೊಂಡು ಅಪ್ಪಾಜಿ ಎನ್ನುವ ನೌಕರನಿಗೆ ತೀವ್ರತರದ ಸುಟ್ಟ ಗಾಯಗಳಾಗಿವೆ.
ಗಂಭೀರವಾಗಿ ಗಾಯಗೊಂಡಿರುವ ಅಪ್ಪಾಜಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ, ಅಳಗಂಚಿ ಗ್ರಾಮದ ಬಳಿ ಇರುವ ಕಾರ್ಖಾನೆಯಲ್ಲಿ ಈ ರೀತಿಯ ಘಟನೆ ನಡೆದಿದ್ದು, ಕಾರ್ಖಾನೆ ಬಾಯ್ಲರ್ ಗಳನ್ನು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ ಎಂದು ಕಾರ್ಮಿಕರ ಆಕ್ರೋಶ ಹೊರ ಹಾಕಿದ್ದಾರೆ.