ತಿ.ನರಸೀಪುರ: ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನೂ
ನರಸೀಪುರ ಪಟ್ಟಣದ ಗುರು ಭವನದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನೂ ನರಸೀಪುರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾದೀಶ ಹನುಮಂತ ಜಿ.ಹೆಚ್ ನೇರವೆರಿಸಿದರು. ನಂತರ ಮಾತನಾಡಿದ ಅವರು, ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಪ್ರತಿಯೊಬ್ಬರ ಸಹಕಾರ ಮುಖ್ಯ.
ಇದರ ಜೊತೆಗೆ ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.
ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ಪಾಲಾಕ್ಷಮೂರ್ತಿ,ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ,ಸರ್ಕಾರಿ ವಕೀಲೆ ಸುಮಿಯಬಾನು ಸೇರಿದಂತೆ ಮತ್ತಿತರರು ಹಾಜರಿದ್ದರು.