ಮೈಸೂರು : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ ಆಗಿತ್ತು.ಗೃಹ ಸಚಿವರ ಹೇಳಿಕೆ ನಾವು ಒಪ್ಪುವುದಿಲ್ಲ.
ಘಟನೆ ನಡೆಯದಿದ್ದರೆ ಸಿಎಂ ಯಾಕೆ ಅಲ್ಲಿಗೆ ಹೋದ್ರು.
ಮಕ್ಕಳಿಂದ ಯಾಕೆ ತಪ್ಪೋಪ್ಪಿಗೆ ಪತ್ರ ಬರೆಸಿದ್ದಾರೆ.
ಅಂದ ಮೇಲೆ ತಪ್ಪು ಮಾಡಿದ್ದಾರೆ ಎಂದು ಅಲ್ವಾ ಎಂದರು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಆ ರೀತಿ ಹೇಳಬಾರದಿತ್ತು.ಎಷ್ಟು ವಿಡಿಯೋಗಳು ಆಫ್ಗನಿಸ್ಥಾನ, ಪಾಕಿಸ್ತಾನಕ್ಕೆ ಹೋಗಿದ್ದವೋ ಗೊತ್ತಿಲ್ಲ.ಎಲ್ಲವು ಸಮಗ್ರವಾಗಿ ತನಿಖೆಯಾಗಲಿ ಎಂದು ಪ್ರಮೋದ್ ಮುತಾಲಿಕ್ ಹೇಳಿದರು