ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿರುವ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಫುಲ್ ಆಕ್ಟೀವ್ ಆಗಿದ್ದಾರೆ. ಸಿಎಂ ಪುತ್ರನಿಗೆ ಮನವಿ ಪತ್ರ ಕೊಡಲು ಜನ ಎಲ್ಲಾ ಕಡೆ ಮುಗಿಬೀಳುತ್ತಿದ್ದಾರೆ.
ಸಿದ್ದರಾಮಯ್ಯ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದ ಮೇಲೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಈಗ ಮೈಸೂರಿನಲ್ಲಿ ಭಾರೀ ಡಿಮ್ಯಾಂಡ್ ವ್ಯಕ್ತವಾಗಿದೆ
ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಸುಮಾರು 3 ಗಂಟೆಗೂ ಹೆಚ್ಚು ಕಾಲ ವರುಣ ಕ್ಷೇತ್ರದ ಜನರ ಬಳಿ ಮನವಿ ಪತ್ರ ಸ್ವೀಕರಿಸಿದ್ದಾರೆ.