ಮೈಸೂರು : ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರು ಇರೋದು ಒಬ್ಬರು ಎಚ್.ಡಿ. ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಅಡಗೂರು ಎಚ್.ವಿಶ್ವನಾಥ್ ವ್ಯಂಗ್ಯವಾಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು.
ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತುದ್ದಾರೆ.ಕುಮಾರಸ್ವಾಮಿ ಅವರೇ ಆ ಪೆನ್ ಡ್ರೈವ್ ಏನಾಯ್ತು ?ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ.ಏನೇನೋ ಆರೋಪ ಮಾಡುತ್ತೀರಿ ?
ಆದರೆ ಯಾವುದನ್ನು ಸಾಬೀತು ಮಾಡಿದ್ದೀರಿ ?
ನೀವು ಮುಖ್ಯಮಂತ್ರಿ ಆಗಿದ್ದವರು.
ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಎಂದು ಕುಮಾರಸ್ವಾಮಿಗೆ ಕುಟುಕಿದರು.
ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್ಪಿ- ಟಿಎಸ್ಪಿ ಹಣ ಬಳಕೆಯನ್ನೂ ಎಚ್.ವಿಶ್ವನಾಥ್ ಸಮರ್ಥನೆ ಮಾಡಿಕೊಂಡರು. ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರ ಇದೆ.ಅದನ್ನೇ ಬಿಜೆಪಿ, ಜೆಡಿಎಸ್ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ.
ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಏನು ಮಾಡಿದ್ರು ಎಂದು ಪ್ರಶ್ನೆ ಮಾಡಿದರು.
ನಾನೂ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದೆ.
ಸಮ್ಮಿಶ್ರ ಸರ್ಕಾರದಲ್ಲಿ 12 ಸಚಿವ ಸ್ಥಾನ ಸಿಕ್ಕಿತ್ತು.
ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು.ಬಂಡೆಪ್ಪ ಕಾಶಂಪೂರ್ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು.ಎರಡು ಸಚಿವ ಸ್ಥಾನ ಖಾಲಿಯೇ ಇತ್ತು.
ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಅಂತ ಕೇಳಿದ್ದೆ.
ಖಾಲಿ ಬಿಟ್ಟರೆ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ.
ಅಂಥವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ.ಜೆಡಿಎಸ್,ಬಿಜೆಪಿ ಎರಡು ದಲಿತ ವಿರೋಧಿಗಳೇ ಎಂದರು.
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು.
ಹೋರಾಟ ಶ್ರೀ ವೀರೇಂದ್ರ ಹೆಗ್ಗಡೆ ವಿರುದ್ಧ ಅಲ್ಲ ಎಂದರು