ಮೈಸೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆರೋಪ ಮಾಡಿರುವ ವಿಚಾರಕ್ಕೆ ಸಚಿವ ಕೆ.ವೆಂಕಟೇಶ್ ತಿರುಗೇಟು ಕೊಟ್ಟಿದ್ದಾರೆ.
ಸುಖಾಸುಮ್ಮನೆ ಆರೋಪ ಮಾಡುವುದಲ್ಲ.
ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ.
ಕುಮಾರಸ್ವಾಮಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ.ಸಮ್ಮಿಶ್ರ ಸರ್ಕಾರ ಬರುತ್ತೇ, ಸಿಎಂ ಆಗ್ತೀನಿ ಅಂತಾ ಕನಸು ಕಾಣ್ತಿದ್ರು.ಕಿಂಗ್ ಮೇಕರ್ ಆಗ್ತೀನಿ,ಸಿಎಂ ಆಗ್ತೀನಿ ಅಂದ್ಕೊಂಡಿದ್ರು.ಆದರೆ ಅವರ ಆಸೆ ಈಡೇರಲಿಲ್ಲ.
ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು
ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ಆ ಮೃತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು ನೊಂದ ಕುಟುಂಬಕ್ಕೆ ಪರಿಹಾರ ಸಿಗಬೇಕು ಎಂದು ಹೇಳಿದರು.