ಮೈಸೂರು : ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರ ಬಳಕೆ ನಿರ್ಬಂಧ ಮಾಡಲಾಗಿದ್ದು
ಅರಮನೆ ಸುತ್ತಮುತ್ತ ಪ್ರದೇಶವನ್ನು “ಹಳದಿ ವಲಯ” ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಈ ಪ್ರದೇಶದಲ್ಲಿ ಡ್ರೋನ್ ಕ್ಯಾಮರಾವನ್ನು ಬಳಸಲು ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಬೇಕು ಅನುಮತಿ ಪಡೆಯದೆ ಅನಧಿಕೃತವಾಗಿ ಹಾರಾಟ ಮಾಡಿದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು
ಮೈಸೂರು ಅರಮನೆ ಆಡಳಿತ ಮಂಡಳಿ ಪ್ರಕಟಣೆ ಮಾಡಿದೆ