ಮೈಸೂರು : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿರುವ ವಿಚಾರ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು.
ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಎಂಟು ಮಂದಿಯ ಸಹಿಯನ್ನು ಒಬ್ಬರೇ ಮಾಡಿದ್ದಾರೆ.ಕೃಷಿ ನಿರ್ದೇಶಕರು, ಜಂಟಿ ನಿರ್ದೇಶಕರು ತಮಗೂ ಪತ್ರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಚಲುವರಾಯಸ್ವಾಮಿ ಒಕ್ಕಲಿಗ ಸಮುದಾಯದ ನಾಯಕ.ಐದು ಚುನಾವಣೆಯಲ್ಲಿ ಸೋತಿದ್ದರು.ಈ ಬಾರಿ ಗೆದ್ದು ಮಂತ್ರಿಯಾಗಿರುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ.ಕುಮಾರಸ್ವಾಮಿ ಅಂಡ್ ಟೀಮ್ ಮಾತ್ರ ಒಕ್ಕಲಿಗ ಸಮುದಾಯದ ಮುಖಂಡರೇ? ಎಂದು ಪ್ರಶ್ನೆ ಮಾಡಿದರು.
ಕುಮಾರಸ್ವಾಮಿ ಪೆನ್ ಡ್ರೈವ್ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ.ನನ್ನ ಬಳಿಯೂ ಪೆನ್ ಡ್ರೈವ್ ಇದೆ.
18 ನಿಮಿಷದ 6 ಎಪಿಸೋಡ್ ನ ಪೆನ್ ಡ್ರೈವ್ ನನ್ನ ಬಳಿಯಿದೆ.ಪೆನ್ ಡ್ರೈವ್ ನಲ್ಲಿರುವ ಮಾಹಿತಿಯನ್ನು ಕುಮಾರಸ್ವಾಮಿ ಬಹಿರಂಗ ಪಡಿಸಲಿ.ಅದಾದ ಒಂದು ಗಂಟೆಯೊಳಗೆ ನನ್ನ ಬಳಿಯಿರುವ ಪೆನ್ ಡ್ರೈವ್ ಮಾಹಿತಿ ಬಹಿರಂಗ ಪಡಿಸುತ್ತೇನೆ.ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ.ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಡೀ ರಾಜ್ಯಕ್ಕೆ ಮಾಸ್ ಲೀಡರ್.
ಅವರನ್ನು ಕುಮಾರಸ್ವಾಮಿ ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಲಕ್ಷ್ಮಣ್ ಹೇಳಿದರು