ಮೈಸೂರು : ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳ ಪ್ರತ್ಯಕ್ಷ ವಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಗುಡ್ಡದಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕಬ್ಬು ಕಟಾವು ವೇಳೆ ಕಾಣಿಸಿಕೊಂಡಿರುವ 2 ಚಿರತೆ ಮರಿಗಳು.ಗುಡ್ಡದಕೊಪ್ಪಲು ಗ್ರಾಮದ ದೊರೆಸ್ವಾಮಿ ಎಂಬುವರ ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾಗಿದೆ.
ಚಿರತೆ ಮರಿಗಳನ್ನ ರಕ್ಷಣೆ ಕೂಲಿ ಕಾರ್ಮಿಕರು ರಕ್ಷಣೆ ಮಾಡಿದ್ದಾರೆ. ನೆನ್ನೆಯಷ್ಟೇ ತುರುಗನೂರು ಕಿರು ಅರಣ್ಯ ಪ್ರದೇಶದಲ್ಲಿ ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ.ಚಿರತೆ ದಾಳಿಯಿಂದ ಆತಂಕಗೊಂಡಿದ್ದ ಸುತ್ತಮುತ್ತಲಿನ ಗ್ರಾಮಸ್ಥರು.ಇದೀಗ ಚಿರತೆ ಮರಿಗಳು ಪ್ರತ್ಯಕ್ಷಗೊಂಡ ಹಿನ್ನೆಲೆ ಮತ್ತಷ್ಟು ಗ್ರಾಮಸ್ಥರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಚಿರತೆ ಹಾವಳಿ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಮನವಿ ಮಾಡಿದ್ದು ಚಿರತೆ ಸೆರೆಗಾಗಿಬಅರಣ್ಯ ಇಲಾಖೆ ಸಿಬ್ಬಂದಿಗಳು ಬೋನು ಇರಿಸಿದ್ದಾರೆ