ಚಾಮರಾಜನಗರ : ಬಂಡೀಪುರ ಸೂಕ್ಷ್ಮ ವಲಯ
ದಲ್ಲಿ ನಟ ಗಣೇಶ ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿದ್ದುಸೂಕ್ಷ್ಮವಕಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಪರಿಸರವಾದಿಗಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1ಎಕರೆ 24 ಗುಂಟೆ ಜಮೀನನ್ನು ಖರೀದಿಸಿರುವ ಗಣೇಶ.
ಇದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿದೆ.ಕಣಿಯನಪುರ ಆನೆ ಕಾರಿಡಾರ್ ಕೂಡ ಈ ಪ್ರದೇಶದಲ್ಲಿ ಹಾದು ಹೋಗಿದೆ.
ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿರುವ ನಟ ಗಣೇಶ್. ಜಮೀನು ಪರಿಸರ ಸೂಕ್ಷ್ಮ ವಲಯ ಹಾಗೂ ಆನೆ ಕಾರಿಡಾರ್ನಲ್ಲಿದೆ ಎಂದು ತಿಳಿದಿದ್ದರೂ ಮಾನಿಟರಿಂಗ್ ಕಮಿಟಿ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಕಟ್ಟಡ ನಿರ್ಮಿಸಲು ಅವಕಾಶ ನೀಡಿರುವುದು ದುರಂತ ಎಂದು ಪರಿಸರವಾದಿ ಜೋಸೆಫ್ ಹೂವರ್ ಆಕ್ರೋಶ ವ್ಯಕ್ತಪಡಿಸಿದರು
2023 ರ ಮಾರ್ಚ್ 15ರಂದು ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು ಜಮೀನಿನಲ್ಲಿ ಸ್ವಂತ ಉಪಯೋಗಕ್ಕೆ ಮನೆ ನಿರ್ಮಿಸಲು ಬಂಡೀಪುರ ನಿರ್ದೇಶಕರ ಅನುಮತಿ.ಅನುಮತಿಗಿಂತ ಹೆಚ್ಚು ಜಾಗದಲ್ಲಿ ಮನೆ ನಿರ್ಮಿಸುವಂತಿಲ್ಲ. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನೂ ಹಾಕಿದ್ದರು ಕಾನೂನು ನಿಯಮ ಉಲ್ಲಂಘನೆ ಮಾಡುರುವ ನಟ ಗೋಲ್ಡನ್ ಸ್ಟಾರ್ ಗಣೇಶ್.
ಇತ್ತಿಚೀನ ದಿನಗಳಲ್ಲಿ ಮಾನವ ವನ್ಯಜೀವಿ ದಾಳಿ ಹೆಚ್ಚುತ್ತಿದೆ ಪ್ರಭಾವಿ ವ್ಯಕ್ತಿಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಅನುಮತಿ ನೀಡುವುದೆ ಇದಕ್ಕೆ ಎಲ್ಲಾ ಕಾರಣವಾಗಿದೆ ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ ಆದರಿಂದ ಮುಂದೆ ಯಾವುದೇ ರೀತಿಯಲ್ಲಿ ಅನುಮತಿ ನೀಡಬಾರದು ಮತ್ತು ಸೆಲೆಬ್ರಿಟಿಗಳು ಮತ್ತು ರೈತರು ಎನ್ನದೆ ತಾರತಮ್ಯ ಮಾಡದೆ ಎಲ್ಲಾರನ್ನು ಒಂದೆ ರೀತಿಯಲ್ಲಿ ಕಾಣಬೇಕು ಎಂದು ಪರಿಸರವಾದಿ ಜೋಸೆಫ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ