• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರು – ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರು – ಸಿಎಂ ಸಿದ್ದರಾಮಯ್ಯ
ಜಿಲ್ಲೆಮೈಸೂರುರಾಜಕೀಯರಾಜ್ಯ

ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರು – ಸಿಎಂ ಸಿದ್ದರಾಮಯ್ಯ

admin
Last updated: 2023/08/12 at 9:44 AM
admin
Share
3 Min Read
SHARE

ಮೈಸೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು.

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ
ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತ ವಾದ ನ್ಯಾಯದಾನ ನೀಡಲು ಸಾಧ್ಯ ಎಂದು ತಿಳಿಸಿದರು.

ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು.
ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ರೀತಿಯ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಲವರ್ಗದವರಿಗೆ, ಬಡವರಿಗೆ ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು ಎಂದರು.

ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ
ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು. ಸಂವಿಧಾನ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ
ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು . ಕಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು. ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ ಸಮಾಜದಲ್ಲಿ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ.ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ. ಬಡವರಿಗೆ , ದಲಿತರಿಗೆ, ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀತವಾಗಿ ಚರ್ಚೆ ಮಾಡಬೇಕಿದೆ. ಇಂಥ ಸಮಾವೇಶ ಗಳನ್ನು ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah Dkshivakumar mysuru Constitution Congress bjp jds
admin August 12, 2023
Share this Article
Facebook Twitter Whatsapp Whatsapp LinkedIn Copy Link
Previous Article ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಾಣ ಪರಿಸರವಾದಿಗಳ ಆಕ್ಷೇಪ
Next Article ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?