ಮೈಸೂರು : ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಅಶೋಕ 40 ಮೃತ ವ್ಯಕ್ತಿ.
ಸಾಲಿಗ್ರಾಮದ ಕರ್ನಾಟಕ ಬ್ಯಾಂಕ್‌ನಲ್ಲಿ 2 ಲಕ್ಷದ 67 ಸಾವಿರ ಸಾಲ, ಹಾಗೂ 5 ಲಕ್ಷ ಕೈ ಸಾಲ ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿದ್ದ ಅಶೋಕ್
ಸಾಲ ತೀರಿಸಲು ಮನೆಯವರ ಒಡವೆ ಗಿರವಿ ಇಟ್ಟಿದ್ದ ಎಂದು ತಿಳಿದು ಬಂದಿದೆ. ಸಾಲ ತೀರಿಸಲಾಗದೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ
ಸುಟ್ಟ ಗಾಯಗಳಾಗಿದ್ದ ಅಶೋಕರನ್ನು ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತುಚಿಕಿತ್ಸೆ ಫಲಕಾರಿಯಾಗದೆ ಅಶೋಕ್ ಸಾವನ್ನಪ್ಪಿದ್ದಾನೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.