ಮೈಸೂರು : ನಟ ಉಪೇಂದ್ರ ಹೇಳಿಕೆ ವಿಚಾರಕ್ಕೇ
ಸಚಿವ ಡಾ ಎಚ್.ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಸಮಾಜಕ್ಕೆ ಮಾರ್ಗ ದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ.
ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನ ಮತ್ತೆ ಮತ್ತೆ ಯಾಕೆ ನೋಯಿಸುತ್ತೀರಾ ಎಂದು ಹೇಳಿದರು.
ಉಪೇಂದ್ರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ.ಕಾನೂನು ತನ್ನ ಕ್ರಮ ಕೈಗೊಳ್ಳುತ್ತೆ.
ಈಗಾಗಲೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾನೂನು ತನ್ನದೆ ಆದ ಕ್ರಮ ಕೈಗೊಳ್ಳುತ್ತೆ. ಉಪೇಂದ್ರ ಹೇಳಿಕೆ ಸರಿಯಲ್ಲ ಎಂದು ತಿಳಿಸಿದರು