ಮೈಸೂರು : ಚಾಮುಂಡಿಬೆಟ್ಟ ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಬೆಟ್ಟದಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ
ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ
ಎರಡನೇ ಬಾರಿಗೆ 5 ಸಾವಿರ ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.ಅರಣ್ಯದ ಒಳಗೆ ತೆರಳಿದರೆ 500 ದಂಡ ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ದಂಡ ವಿಧಿಸಲಾಗುತ್ತದೆ ಸೆಪ್ಟೆಂಬರ್ 1 ರಿಂದ ಆದೇಶ ಜಾರಿಯಾಗಲಿದೆ.
ಮೈಸೂರು ಅರಣ್ಯ ಸಂರಕ್ಷಣಾಧಿಕಾರಿಯಿಂದ ಆದೇಶವಾಗಿದ್ದು ರಾತ್ರಿ 10 ರಿಂದ ಬೆ 6 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ನಿರ್ಬಂಧ ಹೇರಿದ್ದು ಮದ್ಯ ಹಾನಿಕಾರಕ ವಸ್ತು ಸಾಗಿಸಿದರೆ 5 ಸಾವಿರ ದಂಡ ಅಲ್ಲದೆ
ಕಾಡು ಪ್ರಾಣಿಗಳಿಗೆ ಆಹಾರ ನೀಡಿದರೆ 1 ಸಾವಿರ ದಂಡ ವಿಧಿಸಲಾಗುವುದು ಎಂದು ಆದೇಶ ಮಾಡಿದ್ದಾರೆ