ಮೈಸೂರು : ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ಮೈಸೂರಿನ ಹೂಟಗಳ್ಳಿಯ ಕೆಎಚ್ ಬಿ ಕಾಲೋನಿಯಲ್ಲಿ ನಡೆದಿದೆ.
ಬಾಬುರಾವ್ (57), ಪತ್ನಿ ಕಮಲಬಾಯಿ (52) ಚಾಕು ಇರಿತಕ್ಕೆ ಒಳಗಾದವರು.
ಗೃಹಪ್ರವೇಶ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದ ಅಪರಿಚಿತರಿಬ್ಬರು.ಚಿನ್ನದ ವ್ಯಾಪಾರಿ ಬಾಬುರಾವ್ ರನ್ನ ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ.
ಹರೀಶ್ ಮನೇಲಿ ಇಲ್ಲ ಎಂದಿರುವ ಬಾಬುರಾವ್.
ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದಿದ್ದಾರೆ.
ಬಳಿಕ ಅಲ್ಲಿಂದ ಪರಾರಿಯಾಗಿರುವ ಅಪರಿಚಿತರು.
ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ