ಬೆಂಗಳೂರು : ತಮ್ಮ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಮೊನ್ನೆಯಷ್ಟೇ ಹೈಕೋರ್ಟ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಎಫ್.ಐ.ಆರ್ ಗೂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಾಡಿ, ಒಂದೇ ಹೇಳಿಕೆ ಮೇಲೆ ಎರಡು ಎಫ್ಐಆರ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧ ಎಲ್ಲಾ ದೂರುಗಳಿಗೂ ತಡೆ ನೀಡುವಂತೆ ಮನವಿ ಮಾಡಿದರು. ಉಪೇಂದ್ರ ವಕೀಲರ ಮನವಿ ಪುರಸ್ಕರಿಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರು ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದರು.
ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ಮನವಿ ಮಾಡಿಕೊಂಡಿದ್ದರು. ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.