ಮೈಸೂರು : 10 ರಿಂದ 15 ಮಂದಿ ಹಾಲಿ ಹಾಗು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ
ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಚಿವ ಎನ್ ಚೆಲುವರಾಯಸ್ವಾಮಿ ಸ್ಪೋಟಕ ಮಾಹಿತಿ ಹೊರ ಹಾಕಿದ್ದಾರೆ.
ಎಲ್ಲರ ಜೊತೆಯೂ ಮಾತುಕತೆ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ.
ಯಾರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೋ ಅವರ ಹೆಸರನ್ನು ಈಗಲೇ ಹೇಳಲು ಸಾಧ್ಯವಿಲ್ಲ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಹಾಲಿ-ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು