ಮೈಸೂರು : ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನೆಲೆಗೆ ಬಂದಿರುವ ಹಿನ್ನೆಲೆ ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ರೀತಿಯ ಬೆಳವಣಿಗೆ ಆಗುತ್ತಿದೆ ಎಂದು ತಿಳಿದುಕೊಂಡಿದ್ದೇನೆ.ನಮ್ಮ ಪಕ್ಷದ ಯಾವೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಿಲ್ಲ. ಮೈಸೂರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಜೊತೆಯೂ ಈ ಬಗ್ಗೆ ಮಾತನಾಡಿದೆ.ಪಕ್ಷ ತೊರೆಯುವ ಉದ್ದೇಶವಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ ಎಂದರು.
ಹೆಚ್ ವಿ ರಾಜೀವ್ ರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ.
ರಾಜೀವ್ ಅವರು ಪಕ್ಷದ ಕೋರ್ ಕಮಿಟಿ ಸದಸ್ಯರಾಗಿದ್ದಾರೆ.ಅವರು ಮುಡಾ ಅಧ್ಯಕ್ಷರಾಗಿದ್ದರು.
ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿದೆ.
ಹೀಗಾಗಿ ರಾಜೀವ್ ಅವರು ಪಕ್ಷ ತೊರೆಯುವ ಸಾಧ್ಯತೆ ಕಡಿಮೆ.ಮಹಾನಗರ ಪಾಲಿಕೆ ಚುನಾವಣೆ ಯಾವಾಗ ನಡೆದರೂ ಎದುರಿಸಲು ಸಿದ್ದರಿದ್ದೇವೆ.
ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗು ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುವುದು ಎಂದು ತಿಳಿಸಿದರು.