ಚಾಮರಾಜನಗರ : ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಒಂದೇ ದಿನದಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇದರಿಂದ ಮಲೈ ಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳಲ್ಲಿ ಪುಂಡಾನೆಯ ಉಪಟಳಕ್ಕೆ ಬ್ರೇಕ್ ಬಿದ್ದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ರೈತರ ಜಮೀನಿಗೆ ನುಗ್ಗಿ ಬೆಳೆನಾಶ,ದಾಳಿ ಮಾಡುತ್ತಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ.
ನಿನ್ನೆ ನಾಗರಹೊಳೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ.
ಮಲೆ ಮಹದೇಶ್ವರ ಬೆಟ್ಟದ್ದ ಪೊನ್ನಾಚಿ ಗ್ರಾಮದ ಸುತ್ತಮುತ್ತ ದಾಂದಲೆ ನಡೆಸುತ್ತುದ್ದ ಪುಂಡಾನೆ.
ನಿನ್ನೆ ಬೆಳಗ್ಗೆ ಅರ್ಜುನ, ಅಶ್ವತ್ಥಾಮ,ಕರ್ಣ ಮತ್ತು ಬಲರಾಮ ಸಾಕಾನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ. ಕಾರ್ಯಾಚರಣೆ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಪುಂಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ.
ಮಲೆ ಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯ ಪ್ರದೇಶದಲ್ಲಿ ಕಾರ್ಯಾಚರಣೆ.
ಸೆರೆಯಾದ ಆನೆಯನ್ನ ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ದುಬಾರೆ ಶಿಬಿರಕ್ಕೆ ರವಾನೆ.
ಕಳೆದ ಮೂರು ತಿಂಗಳುಗಳಿಂದ ಬೆಳೆನಾಶ,ರೈತರ ಮೇಲೆ ದಾಳಿ ಮಾಡುತ್ತಿದ್ದ ಪುಂಡಾನೆ.
ಸದ್ಯ ಪುಂಡಾನೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಮಲೈ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರು.