ಮೈಸೂರು : ಜೆಡಿಎಸ್ ನ ಯಾವೊಬ್ಬ ಶಾಸಕರು, ಮುಖಂಡರು ಪಕ್ಷ ತೊರೆಯುವುದಿಲ್ಲ ಎಂದು
ಜೆಡಿಎಸ್ ನ ಹಿರಿಯ ಶಾಸಕ ಹಾಗು ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದರು.
ಕಾಂಗ್ರೆಸ್ ಪಕ್ಷ 135 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದಿದೆ.
ಕಾಂಗ್ರೆಸ್ ಕೆರೆ ಇದೀಗ ತುಂಬಿ ತುಳುಕಾಡುತ್ತಿದ್ದು, ಭರ್ತಿಯಾಗಿದೆ.ಬೇರೆಯವರನ್ನು ಸೇರಿಸಿಕೊಂಡರೆ ಕೆರೆ ಒಡೆದು ಹೋಗುತ್ತದೆ.ಈಗಾಗಲೇ ಕಾಂಗ್ರೆಸ್ ನ ಹಲವು ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ.
ಶಾಸಕ ಬಸವರಾಜ ರಾಯರೆಡ್ಡಿಯವರೇ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ನಡುವೆಯೇ ಅಸಮಾಧನವಿದೆ ಎಂದರು.
ಮಾಜಿ ಸಚಿವ ಪುಟ್ಟರಾಜು ಕೂಡ ಜೆಡಿಎಸ್ ಕೋರ್ ಕಮಿಟಿ ಸದಸ್ಯರಾಗಿದ್ದಾರೆ.ನಿನ್ನೆ ನಡೆದ ಸಭೆಯಲ್ಲಿ ಅವರು ಕೂಡ ಭಾಗಿಯಾಗಿದ್ದರು.ಪುಟ್ಟರಾಜು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ.
ನಮ್ಮೊಂದಿಗೇ ಇದ್ದುಕೊಂಡು ಜೆಡಿಎಸ್ ಬಲವರ್ಧನೆ ಮಾಡಲಿದ್ದಾರೆ ಎಂದು ತಿಳಿಸಿದರು