ಮೈಸೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮೈಸೂರಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಿಜಲಿಂಗಪ್ಪನವರಿಂದ ಬಸವರಾಜ್ ಬೊಮ್ಮಾಯಿಯವರ ತನಕ ಎಲ್ಲಾ ಮುಖ್ಯಮಂತ್ರಿಗಳನ್ನ ನೋಡಿದ್ದೇವೆ.
ತಮಿಳುನಾಡಿನ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ನೀರು ಬಿಟ್ಟಿದೆ.ಈ ಹಿಂದೆ ಬಂಗಾರಪ್ಪನವರು ಸಿಎಂ ಆಗಿದ್ದಾಗ ಕಾವೇರಿ ನೀರಿನ ವಿಚಾರದಲ್ಲಿ ದಿಟ್ಟ ನಿಲುವು ತೋರಿದ್ರು.
ನಾವೆಲ್ಲರೂ ಬಂಗಾರಪ್ಪನವರಿಗೆ ಬೆಂಬಲ ನೀಡಿದ್ವಿ.
ಬಂಗಾರಪ್ಪನವರು ತೋರಿದಂತ ದಿಟ್ಟ ನಿಲುವನ್ನ ಈಗಿನ ಮುಖ್ಯಮಂತ್ರಿಗಳು ತೋರುತ್ತಿಲ್ಲ ಎಂದರು.
ಸಿದ್ದರಾಮಯ್ಯನವರು ಒತ್ತಡಕ್ಕೆ ಸಿಲುಕಿದ್ದಾರೆ.
ಯಾವ ಒತ್ತಡಕ್ಕೆ ಸಿಲುಕಿದ್ದಾರೋ ಗೊತ್ತಿಲ್ಲ.
ಸಿದ್ದರಾಮಯ್ಯ ಹೆದರಬೇಕಾದ ಅವಶ್ಯಕತೆ ಇಲ್ಲ.
ಸಿದ್ದರಾಮಯ್ಯ ಎರಡನೇ ಬಾರಿ ಕಾಟಾಚಾರಕ್ಕೆ ಸಿಎಂ ಆಗಿದ್ದಾರೆ.ಅವಧಿ ಮುಗಿಸಿದರೆ ಸಾಕು ಅನ್ನುವ ಮನಸ್ಥಿತಿಯಲ್ಲಿದ್ದಾರೆ.ಸಿದ್ದರಾಮಯ್ಯ ಮೇಲೆ ನನಗೆ ಅಪಾರವಾದ ಗೌರವವಿದೆ, ಆದರೆ ಕಾವೇರಿ ವಿಚಾರದಲ್ಲಿ ಅವರ ನಿಲುವು ಸರಿಯಿಲ್ಲ.
ಕಾವೇರಿ ನೀರು ಬಿಟ್ಟ ಮೇಲೆ ಯಾಕೆ ಸರ್ವ ಪಕ್ಷ ಸಭೆ ಕರೆದಿದ್ದೀರಾ ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.