ಮೈಸೂರು : ಕಾವೇರಿ ಕರ್ನಾಟಕದ ಉಸಿರು.
ನೂರಾರು ವರ್ಷಗಳಿಂದ, ಮದ್ರಾಸ್ ಪ್ರಾಂತ್ಯ ಇದ್ದಾಗಿನನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಹೇಳಿದರು.
ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ.
ಯಾರು ಯಾರಿಗೆ ಎಷ್ಟೆಷ್ಟು ನೀರು ಹಂಚಿಕೆ ಆಗಬೇಕೆಂಬುದು ತೀರ್ಮಾನವಾಗಿದೆ.ಕೋರ್ಟ್ ನ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿದ್ದೇವೆ.
ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟವನ್ನು ಹಂಚಿಕೊಳ್ಳಬೇಕಿದೆ.ಈ ಬಾರಿ ಕಡಿಮೆ ಮಳೆ ಬಿದ್ದಿದೆ, ನಮ್ಮ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇದೆ.
ಕಟ್ಟು ಮಾದರಿಯಲ್ಲಿ ನೀರು ನೀಡಬೇಕೆಂದು ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ ಎಂದರು.
ವೈಯುಕ್ತಿಕ ಹಿತಾಸಕ್ತಿಯಿಂದ ಯಾವುದೇ ಸರ್ಕಾರ ಕೆಲಸ ಮಾಡುವುದಿಲ್ಲ.ರಾಜ್ಯದ ರೈತರ ಹಿತದೃಷ್ಟಿಯಿಂದಲೇ ಕೆಲಸ ಮಾಡಬೇಕು.ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು