ಮೈಸೂರು : ಕಾಂಗ್ರೆಸ್ ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ ಎಂದು ಶಾಸಕ ತನ್ವಿರ್ ಸೇಠ್ ಹೇಳಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನಲೆಗೆ ಬಂದಿರುವ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜನತೆ ನಮಗೆ 135 ಸ್ಥಾನ ಕೊಟ್ಟು ಪೂರ್ಣ ಬಹುಮತ ನೀಡಿದ್ದಾರೆ.ಈ ಸಂದರ್ಭದಲ್ಲಿ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ.ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿದೆ.ಆದರೂ ರಾಜೀನಾಮೆ ನೀಡಿ ಜನರ ಬಳಿಗೆ ಹೋಗೋದು ಎಷ್ಟರ ಮಟ್ಟಿಗೆ ಸರಿ?.
ಆಪರೇಷನ್ ಕಮಲ ಅನ್ನೋದನ್ನು ತಂದಿದ್ದೇ ಬಿಜೆಪಿಯವರು.ಈ ವಿಚಾರಕ್ಕೆ ಹೆಚ್ಚಿನ ಮನ್ನಣೆ ನೀಡುವುದಿಲ್ಲ ಎಂದು ತಿಳಿಸಿದರು.