ಮೈಸೂರು : ಬೆಂಗಳೂರಿನಲ್ಲಿ ನಡೆಯುತ್ತಿರುವುದು ಸರ್ವ ಪಕ್ಷಗಳ ಸಭೆಯಲ್ಲ ನಾಟಕೀಯ ಸಭೆ ಎಂದು
ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.
ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ನೀರಾವರಿ ಕಛೇರಿಗೆ ಮುಂದೆ ಪ್ರತಿಭಟಿಸಿ ಮಾತನಾಡಿದ ಅವರು, ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ.ರಾಜ್ಯದ ಜಲಾಶಯಗಳಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ಹರಿದಿದೆ.
ಈಗ ಸರ್ವ ಪಕ್ಷ ಸಭೆ ಕರೆದಿರುವುದು ಯಾವುದೇ ಪ್ರಯೋಜನವಿಲ್ಲ.ಇದು ಕಣ್ಣೋರೆಸುವ ತಂತ್ರವಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದರು
ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜ್ಯವನ್ನು ಕೊಳ್ಳೆ ಹೊಡೆದಿವೆ. ಮೂರು ಪಕ್ಷಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಕ್ಷಗಳನ್ನು ಸಭೆಗೆ ಆಹ್ವಾನಿಸಿಲ್ಲ, ಇದು ಅಪರಿಪೂರ್ಣ ಸಭೆ ಎಂದು ಕಿಡಿ ಕಾರಿದರು.
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ. ನಮ್ಮ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತಮ್ಮ ವೈಫಲ್ಯವನ್ನು ಮರೆ ಮಾಚಲು ಸರ್ವ ಪಕ್ಷಗಳನ್ನು ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ದೂರಿದರು.
ರಾಜ್ಯದ ಜಲಾಶಯಗಳಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ಹರಿದಿದೆ. ಈಗ ಸರ್ವ ಪಕ್ಷ ಸಭೆ ಕರೆದಿರುವುದು ಯಾವುದೇ ಪ್ರಯೋಜನವಿಲ್ಲ. ಇದು ಕಣ್ಣೋರೆಸುವ ತಂತ್ರವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದ್ದಾರೆ.