ಮೈಸೂರು : ಗೃಹ ಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ.
ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ.
ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ.
ಬೆಳಗಾವಿಯಲ್ಲಿ ನಾವು ಎರೆಡು ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆಮೈಸೂರಿನಲ್ಲಿ ಅನ್ನ ಭಾಗ್ಯ ಮಾಡುವ ಪ್ಲಾನ ಇತ್ತು.ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ.
ಹೀಗಾಗಿ ಗೃಹ ಲಕ್ಷ್ಮೀಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದರು.
ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೇವೆ.ಆದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಉಂಟಾಗುತ್ತವೆ ಎಂದು ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ.
30 ರಂದು ಒಂದು ಬಟನ್ ಅದಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ.
ಅದರ ಮೇಸೆಜ್ ಗಳು ಅವರ ಮೊಬೈಲ್ ನಂಬರ್ ಗಳಿಗೆ ಬರುತ್ತದೆ.ನಮ್ಮಲ್ಲಿ ಹಣದ ಕೊರತೆ ಇಲ್ಲ.
ಎಲ್ಲಾ ಹಣವನ್ನ ಬ್ಯಾಂಕ್ ಗೆ ಡೆಪಾಸಿಟ್ ಮಾಡಿದ್ದೇವೆ.
ಸರ್ವರ್ ಸಮಸ್ಯೆ ಆದರೆ ಒಂದಿಷ್ಟಿ ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ಡಿ.ಕೆ ಶಿವಕುಮಾರ್ ಹೇಳಿದರು.