ಮೈಸೂರು : ಗೃಹಲಕ್ಷ್ಮಿ ಯೋಜನೆ ಇಡೀ ರಾಜ್ಯದಲ್ಲಿ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿ.
ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಕ್ಕಾಗಿ 2 ಸಾವಿರ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ.ಕೆಲ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ವ್ಯವಸ್ಥೆಮಾಡಲಾಗುತ್ತಿದೆ.
ರಾಜ್ಯದಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ ಎಂದರು.
ಆನ್ ಲೈನ್ ಮೂಲಕ ಸಂವಾದಕ್ಕೂ ವ್ಯವಸ್ಥೆ ಮಾಡುತ್ತೇವೆ.ಕಾರ್ಯಕ್ರಮ ಸ್ಥಳದಲ್ಲಿ ಕುಡಿಯುವ ನೀರು ಹೊರತುಪಡಿಸಿ ಬೇರೆ ಯಾವುದೇ ವ್ಯವಸ್ಥೆ ಇರುವುದಿಲ್ಲ.
140 ಅಡಿ ಸ್ಕ್ರೀನ್ ಅಳವಡಿಸಲಾಗುತ್ತದೆ.
ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದು, ಪಕ್ಷಾತೀತ ಆಗಿರಲಿದೆ.ಎಲ್ಲಾ ಪಕ್ಷಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು.ಕಾರ್ಯಕ್ರಮ ಸ್ಥಳದಲ್ಲಿ ಒಂದು ಲಕ್ಷ ಚೇರ್ ಅಳವಡಿಸಲಾಗುತ್ತದೆ ಎಂದು ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು.