ಮೈಸೂರು : ಪರಮಪೂಜ್ಯ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108ನೇ ಜಯಂತಿ ಹಿನ್ನೆಲೆಯಲ್ಲಿ ನಗರದ ರಾಜೇಂದ್ರ ಸಭಾ ಭವನದಲ್ಲಿ ಸುತ್ತೂರು ಮಹಾಸಂಸ್ಥಾನ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು.
ಆಗಸ್ಟ್ 29ರಂದು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.
ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,ಸಿದ್ದಗಂಗಾ ಮಠದ ಸಿದ್ದಲಿಂಗಮಹಾಸ್ವಾಮಿಗಳು,ನಿರ್ಮಲನಂದನಾಥ ಮಹಾಸ್ವಾಮಿಗಳು,ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ ಎಂದು ಬೆಟ್ಸೂರ್ ಮಠ ತಿಳಿಸಿದರು.
ಕಾರ್ಯಕ್ರಮವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟನೆ ಮಾಡಲಿದ್ದಾರೆ ರಾಜಗುರುತಿಲಕ ಕೃತಿಯನ್ನ ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಲಿದ್ದಾರೆ.
ಶಾಸಕ ಜಿಟಿ ದೇವೇಗೌಡರು ಪ್ರಸಾದ ಮಾಸಿಕ ವಿಶೇಷ ಸಂಚಿಕೆಯನ್ನ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜೆಎಸ್ಎಸ್ ಸಂಸ್ಥೆಯಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಪ್ರತಿ ವರ್ಷದಂತೆ ಈ ಬಾರಿಯೂ ಮೃಗಾಲಯದ ಪ್ರಾಣಿ ಪಕ್ಷಿಗಳ ಒಂದು ದಿನದ ಆಹಾರಕ್ಕಾಗಿ ಒಂದು ಲಕ್ಷ ಚೆಕ್ ವಿತರಣೆ ಮಾಡಲಾಗಿದೆ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜಯಂತಿ ಪ್ರಯುಕ್ತ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಟ್ ಸೂರ್ ಮಠ್ ತಿಳಿಸಿದರು.