ಮೈಸೂರು : ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಗಣನೆ ಆರಂಭವಾಗಿದ್ದು ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಸಲ್ಲಿ ಸುಮಾರು ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಇಂದು ವೇದಿಕೆ ನಿರ್ಮಾಣ ಕಾಮಗಾರಿಯನ್ನೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿಜೆ ವಿಜಯ್ ಕುಮಾರ್,ಮಾಜಿ ಜಿಪಂ ಮುಖಂಡ ಮರೀಗೌಡ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.