ಮೈಸೂರು : ಬೆಂಗಳೂರಿನ ಟಿಕ್ ಟಾಕ್ ಸ್ಟಾರ್ ಮೈಸೂರಿನಲ್ಲಿ ಕೊಲೆಯಾಗಿದ್ದ ಪ್ರಕರಣವನ್ನು ಪೊಲೀಸರು
ಬೇಧಿಸಿದ್ದಾರೆ.
ಇದೇ ತಿಂಗಳು 27 ರಂದು ಮೈಸೂರಿಗೆ ಆಗಮಿಸಿದ್ದ ಟಿಕ್ ಟಾಕ್ ಸ್ಟಾರ್ ನವೀನ್.ಇಬ್ಬರು ಯುವತಿಯರ ಜೊತೆ ಮೈಸೂರಿಗೆ ಆಗಮಿಸಿ ಅರಮನೆ ಮುಂದೆ ರೀಲ್ಸ್ ಮಾಡುತ್ತಿದ್ದ ವೇಳೆ ಅಪಹರಣ.ಕಾರಿನಲ್ಲಿ ಬಂದು ನವೀನ್ ಅಪಹರಿಸಿಕೊಂಡು ಹೋಗಲಾಗಿತ್ತು.27 ರಂದು ರಾತ್ರಿ 9.45 ರ ಸಮಯದಲ್ಲಿ ಅಪಹರಣ.ಬಳಿಕ ನಂಜನಗೂಡಿನ ಗೋಳೂರಿನ ನಾಲೆಯಲ್ಲಿ ಶವ ಪತ್ತೆಯಾಗಿತ್ತು.
ಅಪರಿಚಿತ ವ್ಯಕ್ತಿಯ ಕೊಲೆ ಎಂದು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗಾ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು.ಎಂಟು ಜನ ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು.ಬೆಂಗಳೂರಿನ ಕಾರ್ಪೋರೆಟರ್ ಅಣ್ಣನ ಮಗನ ಕೊಲೆ ರಿವೆಂಜ್ ಗಾಗಿ ನವೀನ್ ಕೊಲೆ ಮಾಡಿರುವ ಶಂಕೆ.ಈ ಹಿಂದೆ ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ವಿನೋದ್ ಎಂಬುವವರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಕೆಲದಿನಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದ ನವೀನ್.ಟಿಕ್ ಟಾಕ್ ಮಾಡುತ್ತಿದ್ದರಿಂದ ನವೀನ್ ಟಿಕ್ ಟಾಕ್ ಸ್ಟಾರ್ ಎಂದೆ ಗುರುತಿಸಿಕೊಂಡಿದ್ದ.
ಸದ್ಯ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.