ಮೈಸೂರು : ಮೈಸೂರಿನಲ್ಲಿ ಕಾವೇರಿ ಗಲಾಟೆ ಕಾವೇರಿದ್ದು
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ಖಂಡಿಸಿ ರೈತರು ಪಂಜಿನ ಮೆರವಣಿಗೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ಕಬ್ಬು ಬೆಳೆಗಾರರ ಸಂಘದಿಂದ ಪಂಜಿನ ಮೆರವಣಿಗೆಯನ್ನೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಸಲಾಯಿತು.
ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ.ದೊಡ್ಡಗಡಿಯಾರ ವೃತ್ತ ಬಳಸಿ ಮತ್ತೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ಮುಕ್ತಾಯವಾಯಿತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.