ಮೈಸೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾಮ ಹಾಕಿಕೊಂಡು ಜಾಗಟೆ ಬಾರಿಸುವ ಮೂಲಕ ಪ್ರತಿಭಟನಾಕರರು ಸರ್ಕಾರದ ವಿರುದ್ಧ ದಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದರು. ಅಲ್ಲದೆ ಈ ಕೂಡಲೇ ಹರಿಬಿಡುತ್ತಿರುವ ನೀರನ್ನ ನಿಲ್ಲಿಸಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದರು