ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಲಘು ಸ್ಟ್ರೋಕ್ ನಿಂದ ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದಾರೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮರಸ್ವಾಮಿ ಹೇಳಿದರು