ಮೈಸೂರು : ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ.
ಮಳೆಗಾಲದಲ್ಲೇ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿದ್ದು, ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಅಳಲಹಳ್ಳಿ ಹಾಡಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಬಂದಿದೆ.
ಹಾದನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಅಳಲಹಳ್ಳಿ ಹಾಡಿ ಗ್ರಾಮದಲ್ಲಿ ಕುಡಿಯುವ ನೀರು ಸಿಗದೇ ಅಳಲಹಳ್ಳಿಯ ಹಾಡಿಯ ನಿವಾಸಿಗಳು ಪರಿತಪಿಸುತ್ತಿದ್ದಾರೆ
ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ ಹಾಡಿಯ ನಿವಾಸಿಗಳು.ಈ ಸಂಬಂಧ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ ಸಂಘಟನೆಯ ಸದಸ್ಯರು ಸಾಥ್ ನೀಡಿದರು