ಮೈಸೂರು : ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಪಲ್ಟಿ ಹೊಡೆಯಲಿವೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ಪಕ್ಷಗಳ ಮೈತ್ರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ.ಬಿಜೆಪಿಯಿಂದ ಜೆಡಿಎಸ್ ಗೆ ಅದೇ ರೀತಿ ಜೆಡಿಎಸ್ ನಿಂದ ಬಿಜೆಪಿಗೂ ಅನುಕೂಲವಾಗುವುದಿಲ್ಲ.ಎರಡು ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ.
ವಿಧಾನಸಭೆ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ ಗೆ ಬೀಳಲಿವೆ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 22 ರಿಂದ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು
ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ.
ಇದೇ ಕಾರಣದಿಂದ ಕಂಡ ಕಂಡವರ ಕಾಲು ಹಿಡಿಯುತ್ತಿದ್ದಾರೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ.
ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹ ಗೆಲ್ಲುವುದಿಲ್ಲ.
ಈ ಬಗ್ಗೆ ಸಮೀಕ್ಷೆ ವರದಿಗಳು ಹೇಳಿವೆ.
ಪ್ರತಾಪ್ ಸಿಂಹ 100 ಕ್ಕೆ 100ರಷ್ಟು ಸೋಲುತ್ತಾರೆ.
ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು