ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಯಾಗಿ ಸುಶ್ರುತ್ ಗೌಡ ಹೆಸರು ಕೇಳಿ ಬರುತ್ತಿರುವ ವಿಚಾರವಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದರು.
ಶುಶ್ರುತ್ ಗೌಡ ಯಾರೆಂದೇ ನನಗೆ ಗೊತ್ತಿಲ್ಲ.
ಕೇವಲ ಫ್ಲೆಕ್ಸ್ ಹಾಕಿಸಿಕೊಂಡು ನಾಯಕರಾಗಿ ಟಿಕೆಟ್ ಪಡೆಯಲು ಸಾಧ್ಯವಿಲ್ಲ.ಶುಶ್ರುತ್ ಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದಿಲ್ಲ.
ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ದನಿದ್ದೇನೆ.ಸಿಎಂ ಸಿದ್ದರಾಮುಯ್ಯನವರ ಪುತ್ರ ಡಾ ಯತೀಂದ್ರರ ಹೆಸರು ಕೂಡ ಕೇಳಿ ಬರುತ್ತಿದೆ.
ಒಂದು ವೇಳೆ ಯತೀಂದ್ರ ಅವರಿಗೆ ಟಿಕೆಟ್ ನೀಡಿದರೆ ಎಲ್ಲರೂ ಒಗ್ಗಟ್ಟಿನಿಂದ ಪ್ರಚಾರ ಮಾಡಿ ಗೆಲ್ಲಿಸುತ್ತೇವೆ ಎಂದರು