ಧಾರವಾಡ : ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಮತ್ತು ಭೂಹಗರಣ ಆರೋಪ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ತಡೆ ನೀಡಿದೆ. ಸಚಿವ ಸುಧಾಕರ್‌ಗೆ ಸದ್ಯ ರಿಲೀಫ್ ಸಿಕ್ಕಿದೆ.
ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪ ಹೊತ್ತಿದ್ದ ಸಚಿವ ಸುಧಾಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಇಂದು (ಶುಕ್ರವಾರ) ವಿಚಾರಣೆ ನಡೆಯಿತು. ಪ್ರಕರಣಕ್ಕೆ ಕೋರ್ಟ್ ತಡೆ ನೀಡಿದೆ. ಅಲ್ಲದೇ ದೂರು ದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ದಲಿತ ದೌರ್ಜನ್ಯ, ಭೂಹಗರಣ ಆರೋಪದಲ್ಲಿ ಸಚಿವ ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದರು. ಅಲ್ಲದೇ ಸಚಿವ ಸುಧಾಕರ್ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು.
ಮುನಿಯಮ್ಮ ಎಂಬುವವರ ಜಾಗ ಕಬಳಿಕೆ ಮಾಡಿಕೊಂಡು ಸಚಿವ ಹಾಗೂ ಬೆಂಬಲಿಗರಿಂದ ಅವರ ಮೇಲೆ ಜಾತಿ ನಿಂದನೆ ಮಾಡಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವಿಚಾರವಾಗಿ ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಮಹಜರು ಮಾಡಿದ್ದರು. ಈ ಸಂಬಂಧ ತನಿಖೆ ಮುಂದುವರಿದಿತ್ತು.