ಮೈಸೂರು : ಚೈತ್ರಾ ಕುಂದಾಪುರ ಬಿಜೆಪಿ ಆರ್ ಎಸ್ ಎಸ್‌ನ ಬೇನಾಮಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನು ಎರಡು ದಿನದಲ್ಲಿ ಇವರ ಹಿಂದೆ ಇರುವ ಗುಂಪುಎಷ್ಟು ಹಣ ಪಡೆದಿದ್ದಾರೆ ಯಾರಿಗೆ ಹೋಗಿದೆ ಅನ್ನುವುದನ್ನು ಪೋಲೀಸರು ಕೊಡುತ್ತಾರೆ
ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ
23 ಜನಕ್ಕೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ
40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ 185 ಕೋಟಿಯ ವ್ಯವಹಾರ ಇಲ್ಲಿ ಆಗಿದೆ ಎಂದು ಹೇಳಿದರು.
ಟಿಕೆಟ್ ನೀಡಿ ಕೋಟ್ಯಾಂತರ ಹಣ ಪಡೆಯಲಾಗಿದೆ
ಚೈತ್ರಾ ಕುಂದಾಪುರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ.ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಕಳೆದುಕೊಂಡಿದ್ದಾರೆ 9 ಜನರ ತಂಡದಿಂದ ಮೋಸದ ಕೃತ್ಯಇವರೆಲ್ಲಾ ಬಿಜೆಪಿ ಹಾಗೂ ಅರ್ ಎಸ್ ಎಸ್ ಕಾರ್ಯಕರ್ತರು ಬಿಜೆಪಿ ಹರಿಶ್ಚಂದ್ರನ ಮೊಮ್ಮಕ್ಕಳು ಅನ್ನುತ್ತಾರೆ ಇವರ ಯೋಗ್ಯತೆ ಏನು ಅನ್ನೋದು ಬಹಿರಂಗಪಡಿಸಬೇಕು ಎಂದರು.
ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಅನ್ನೋ ಬಗ್ಗೆ ತನಿಖೆಯಾಗಬೇಕು.
ಸಿ ಟಿ ರವಿ ಯಡಿಯೂರಪ್ಪ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು
ಚೈತ್ರಾ ಪಿಎಸ್‌ಐ ಹಾಗೂ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ
ಚೈತ್ರಾಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ
ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು