ಮೈಸೂರು : ಯುನೆಸ್ಕೊ ಪಾರಂಪರಿಕ ಸ್ಥಳಗಳ ಪಟ್ಟಿಗೆ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯ ಸೇರ್ಪಡೆ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಸೋಮನಾಥಪುರ ಗ್ರಾಮದಲ್ಲಿರುವ ದೇವಾಲಯ.
ಸೋಮನಾಥಪುರ ಚನ್ನಕೇಶವ ದೇವಾಲಯ ಯುನೆಸ್ಕೊ ಪಾರಂಪರಿಕ ಸ್ಥಳಗಳ ಪಟ್ಟಿಗೆ ಸೇರ್ಪಡೆ ಹಿನ್ನೆಲೆ.
ಸಂತಸ ಹಂಚಿಕೊಂಡ ಸಚಿವ ಹೆಚ್ ಸಿ ಮಹದೇವಪ್ಪ.
ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಹದೇವಪ್ಪ. ಹೊಯ್ಸಳರ ಕಾಲದ ಶಿಲ್ಪಕಲಾ ದೇವಾಲಯಗಳಿಗೆ ಯುನೆಸ್ಕೊ ಪಾರಂಪರಿಕ ಕಟ್ಟಡಗಳ ಮಾನ್ಯತೆ ದೊರೆತಿದ್ದು ನಮ್ಮ ನಾಡಿಗೆ ಹೆಮ್ಮೆಯ ವಿಷಯ.
ನಮ್ಮ ಕಲೆ ಸಾಹಿತ್ಯ ಹಾಗೂ ಶಿಲ್ಪಕಲೆಯ ಮಹತ್ವವನ್ನ ಎತ್ತಿ ಹಿಡಿಯುವ ಕೆಲಸವನ್ನ ಸರ್ಕಾರ ಮಾಡಲಿದೆ ಎಂದು
ಟ್ವಿಟ್ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಸಂತಸ ವ್ಯಕ್ತಪಡಿಸಿದ್ದಾರೆ