ಚಾಮರಾಜನಗರ :ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಬ್ಬು ಬೆಳೆಗಾರರ ಸಂಘ, ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಬಳಿ ಜಮಾ ಯಿಸಿದ ಪ್ರತಿಭಟನಾಕಾರರು ರಾಜ್ಯ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ರಾಜ್ಯ ಹಾಗೂ ತಮಿಳುನಾಡು ಸರ್ಕಾರಗಳ ಅಣಕು ಶವಯಾತ್ರೆ ನಡೆಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾ ರರು ಅಣಕು ಶವ ಹೊತ್ತು
ಪಚ್ಚಪ್ಪ ವೃತ್ತಕ್ಕೆ ತೆರಳಿದರು. ರಾಜ್ಯ ಹಾಗೂ ತಮಿಳುನಾಡುಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ತಮಿಳುನಾಡಿಗೆ ನೀರು ಬಿಡಲು ಹೊರಟಿರುವ ರಾಜ್ಯ, ಕೇಂದ್ರ ಸರ್ಕಾರಗಳು ರೈತರ ಪಾಲಿಗೆ ಮರಣ ಶಾಸನ ಬರೆದಿವೆ. ರೈತರಿಗೆ ಆತ್ಮಹತ್ಯೆ ಭಾಗ್ಯ ಕೊಡಲು ಹೊರಟಿವೆ. ಕೇಂದ್ರ, ರಾಜ್ಯ ಹಾಗೂ ತಮಿಳುನಾಡು ಸರ್ಕಾರಗಳು ರೈತರ ಪಾಲಿಗೆ ಸತ್ತು ಹೋಗಿವೆ. ಆದ್ದರಿ೦ದ ಶವಯಾತ್ರ ಮಾಡುತ್ತಿದ್ದೇವೆ. ಕೇಂದ್ರದಲ್ಲಿ 28 ಸಂಸದರಿದ್ದಾರೆ. ಆದರೆ, ಒಬ್ಬ ಸಂಸದ ಕೂಡ ರೈತರ ಪರ, ಕಾವೇರಿ ವಿಚಾರವಾಗಿ ಮಾತ ನಾಡುತ್ತಿಲ್ಲ. ತಮಿಳುನಾಡಿಗೆ ಗುಲಾಮಗಿರಿಯಂತೆ ಕೆಲಸ ಮಾಡುತ್ತಿದ್ದಾರೆ ಎ೦ದು ದೂರಿದರು.
ತಮಿಳುನಾಡು ಸರ್ಕಾರ ಮೂರನೇ ಬೆಳೆಗೆ ನೀರು ಕೇಳುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿನ ಸಮಸ್ಯೆ ಎದುರಾಗಿದೆ. ಮಂಡಳಿಗಳು ತಮಿಳುನಾಡು ಪರ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಟೇಲ್ ಶಿವಮೂರ್ತಿ, ಹಾಲಿನ ನಾಗರಾಜು, ಹರ್ಷ, ಮಂಜು, ಕುಮಾರ್, ಪ್ರವೀಣ್, ಮಹೇಂದ್ರ, ಸತೀಶ್, ಮಹದೇವಸ್ವಾಮಿ, ಷಡಕ್ಷರಿ, ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.