ಚಾಮರಾಜನಗರ : ಎಲ್ಲೆಲ್ಲಿ ಆಸ್ಪತ್ರೆಯ ಅವಶ್ಯಕತೆ ಇದೆ ಅಲ್ಲಿಗೆ ರಾಜ್ಯ ಸರ್ಕಾರ ಆಸ್ಪತ್ರೆ ಮಂಜೂರು ಮಾಡಲು ಸಿದ್ದವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿರುವ ಕಾಂಗ್ರೇಸ್ ಕಛೇರಿಗೆ ಆಗಮಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾದ್ಯಮದವರೊಂದಿಗೆ ಮಾತನಾಡಿ, ಹನೂರು ತಾಲ್ಲೂಕ್ಕಾಗಿ ಹಲವಾರು ವರ್ಷ ಕಳೆದರೂ ಸಹ ಇಲ್ಲಿಗೆ ತಾಲ್ಲೂಕು ಆಸ್ಪತ್ರೆ ಮಂಜೂರು ಆಗಿರಲಿಲ್ಲ, ಪ್ರಸ್ತುತ ಈಗಿನ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿ ಮುಂದಿನ ವರ್ಷದೊಳಗೆ ತಾಲ್ಲೂಕು ಆಸ್ಪತ್ರೆಯನ್ನು ಮಂಜೂರು ಮಾಡುವುದಲ್ಲದೆ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.
ಹನೂರು ತಾಲ್ಲೂಕಿಗೆ ಡಯಾಲಿಸ್ ಘಟಕವನ್ನು ತಕ್ಷಣವೇ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿ, ಆಂಬುಲೆನ್ಸ್ ಸೇವೆಯನ್ನು ಹನೂರು ತಾಲ್ಲೂಕಿನಲ್ಲಿ ಹೆಚ್ಚಿನ ಸೇವೆ ಸಲ್ಲಿಸಲು ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ವೇಳೆ ಮಾಜಿ ಶಾಸಕ ಆರ್ ನರೇಂದ್ರ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಹಾಜರಿದ್ದರು.